ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ. ಬೆಂಗಳೂರು,ಸೆಪ್ಟಂಬರ್,21,2021(..):ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು ಮುಷ್ಕರದ ವೇಳೆ ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಆದೇಶ ಹೊರಡಿಸಿದೆ. ಈ ಕುರಿತು ಇಂದು ಸಾರಿಗೆ ನೌಕರರು ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಸಭೆ ನಡೆದಿದ್ದು ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಶ್ರೀರಾಮುಲು, ಮುಷ್ಕರದ ವೇಳೆ ವಜಾಗೊಂಡಿದ್ದ 4,200 ಸಾರಿಗೆ ನೌಕರರನ್ನು ಮರು ನೇಮಕ ಮಾಡಲು ನಿರ್ಧರಿಸಲಾಗಿದೆ. ಮುಷ್ಕರದ ವೇಳೆ ಅಮಾನತು, ವಜಾ, ವರ್ಗಾವಣೆ ಸೇರಿದಂತೆ ಬಹುತೇಕ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ತಿರ್ಮಾನಿಸಿದೆ. ವಜಾಗೊಂಡಿದ್ದ ಅಷ್ಟು ಸಾರಿಗೆ ನೌಕರರ ಮರುನೇಮಕ ಮಾಡಿಕೊಳ್ಳಲಾಗುತ್ತದೆ ಎಂದರು. ಸಾರಿಗೆ ಯುನಿಯನ್ ನಾಯಕರ ಜತೆ ಚರ್ಚಿಸಲಾಗಿದೆ. ಟ್ರೇಡ್ ಯುನಿಯನ್ ಜತೆ ಚರ್ಚಿಸುತ್ತೇವೆ. ಸಿಎಂ ಜತೆ ಚರ್ಚಿಸಲಾಗಿದೆ. ಸಾರಿಗೆ ಇಲಾಖೆಗೆ ತೊಂದರೆಯಾಗಬಾರದು ಎಂದು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಶ್ರೀರಾಮಯಲು ತಿಳಿಸಿದರು. : – – . … . , 21, 2021 (..): . . , . 4,200 . “ , , , , . ,” ., , “ . . . .”: / . / /