ನೀಟ್ ಪರೀಕ್ಷೆ ಅಕ್ರಮ: ಮರು ಪರೀಕ್ಷೆ ಮತ್ತು ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ. ಮೈಸೂರು,ಜೂನ್,15,2024 (..):2024ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮತ್ತು ಮರು ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೀಟ್ ಪರೀಕ್ಷೆ ಅಕ್ರಮದಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ ನೀಟ್ ಮರುಪರೀಕ್ಷೆ ನಡೆಯಬೇಕು . ಗ್ರೇಶ್ ಮಾರ್ಕ್ಸ್ ಕೊಟ್ಟು ಪಾಸ್ ಮಾಡಿರುವುದು ಸರಿಯಲ್ಲ. ನೀಟ್ ಪರೀಕ್ಷೆ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಪತ್ರ ಬರೆಯಲಾಗುತ್ತದೆ ಎಂದು ತಿಳಿಸಿದರು. ಲೇಖಕಿ ಅರುಂಧತಿರಾಯ್ ಹೇಳಿಕೆ ವಿವಾದ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಈ ರೀತಿ ಹೆದರಿಸಿ ಬೆದರಿಸೋದು ಬಿಜೆಪಿ ಸಂಸ್ಕೃತಿ. ಈ ಕಾರಣದಿಂದಲೇ ಬಿಜೆಪಿಗೆ ಸ್ಪಷ್ಟ ಬಹುಮತ ಬಂದಿಲ್ಲ ಎಂದು ಲೇವಡಿ ಮಾಡಿದರು.ದುರುಹಂಕಾರದಿಂದ ಬಿಜೆಪಿ 240ಕ್ಕೆ ಕುಸಿದಿದೆ ಎಂಬ ಆರ್ ಎಸ್ ಎಸ್ ನಾಯಕರ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಆರ್ ಎಸ್ಎಸ್ ನ ಮುಖವಾಡ. ಇವರು ಏನೇ ಮಾಡಿದರೂ ದಕ್ಷಿಣ ಭಾರತದಲ್ಲಿ ಹೆಚ್ಚು ಸ್ಥಾ‌ನ ಗೆಲ್ಲಲು ಸಾಧ್ಯವಿಲ್ಲ ಎಂದರು. : , , , ,