ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಬೆಂಗಳೂರು,ಸೆಪ್ಟಂಬರ್,20,2021(..):ದ್ವಿತೀಯ ಪಿಯುಸಿ ಫಲಿತಾಂಶವನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಪ್ರಕಟಿಸಿದ್ದಾರೆ. ಖಾಸಗಿ ವಿದ್ಯಾರ್ಥಿಗಳು, ರಿಸಲ್ಟ್ ತಿರಸ್ಕರಿಸಿದ್ದ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಕುರಿತು ಸುದ್ಧಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಒಟ್ಟು 18,414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. : - . - - - - … .. 2nd , 20, 2021 (..): .. 2nd . , 18,414 2nd 17,470 , 351 592 . , 5,507 , 12,906 .: /.. / 2nd /