ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ: ಹಲವು ವಿಚಾರ ಚರ್ಚೆ ಸಾಧ್ಯತೆ. ಬೆಂಗಳೂರು,ಸೆಪ್ಟಂಬರ್,20,2021(..):ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಹಲವು ವಿಚಾರಗಳು ಚರ್ಚೆಗೆ ಬರುವ ಸಾಧ್ಯತೆ ಇದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ದೇಗುಲಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಣಯ,ಮಹಾನಗರ ಪಾಲಿಕೆಗಳ ಮೇಯರ್ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. : – -