ಪಂಜಾಬ್ ಮುಖ್ಯಮಂತ್ರಿ ಸ್ಥಾನ ಬೇಡ ಎಂದ ಅಂಬಿಕಾ ಸೋನಿ ಬೆಂಗಳೂರು, ಸೆಪ್ಟೆಂಬರ್ 19, 2021 (..):ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ ಪ್ರಸ್ತಾಪವನ್ನು ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ಶನಿವಾರ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಸದ್ಯ ಮೂಲಗಳ ಪ್ರಕಾರ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಜಾಖರ್, ಪ್ರಸ್ತುತ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಸುಖ್ ಜಿಂದರ್ ಸಿಂಗ್ ರಾಂಧವಾ ಸಿಎಂ ರೇಸ್ ನಲ್ಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಗಾಂಧಿ ನಿಷ್ಠಾವಂತ, ಅಂಬಿಕಾ ಸೋನಿ ಅವರನ್ನು 1969 ರಲ್ಲಿ ಇಂದಿರಾ ಗಾಂಧಿ ಪಕ್ಷಕ್ಕೆ ಕರೆತಂದಿದ್ದರು. ವಿಭಜನೆಯ ಸಮಯದಲ್ಲಿ ಅವರ ತಂದೆ ಅಮೃತಸರದ ಜಿಲ್ಲಾಧಿಕಾರಿಯಾಗಿದ್ದರು. ನೆಹರು ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದರು. ಸಂಜಯ್ ಗಾಂಧಿ ಅವರೊಂದಿಗೂ ಕೆಲಸ ಮಾಡಿದ್ದರು. :