ಪಂಜಾಬ್ ಸಿಎಂ ಸ್ಥಾನಕ್ಕೆ ಕ್ಯಾ.ಅಮರೀಂದರ್ ಸಿಂಗ್ ರಾಜೀನಾಮೆ ಸಲ್ಲಿಕೆ. ಪಂಜಾಬ್,ಸೆಪ್ಟಂಬರ್,18,2021(..):ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾ.ಅಮರಿಂದರ್ ಸಿಂಗ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನ ಭೇಟಿ ಮಾಡಿದ ಕ್ಯಾ.ಅಮರೀಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಬೆನ್ನಲ್ಲೆ ಸಿಎಂ ಸ್ಥಾನಕ್ಕೆ ಕ್ಯಾ.ಅಮರೀಂದರ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಮೊದಲು ಮುಖ್ಯಮಂತ್ರಿಯನ್ನು ಬದಲಿಸಬೇಕೆಂದು ಪಂಜಾಬ್ ಕಾಂಗ್ರೆಸ್ ನ 80 ಶಾಸಕರ ಪೈಕಿ 50 ಶಾಸಕರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ. ಇದೀಗ ಸುನೀಲ್ ಕುಮಾರ್ ಜಾಖರ್ ಸಿಎಂ ರೇಸ್ ನಲ್ಲಿದ್ದಾರೆ. : - - -