ವಾರಾಂತ್ಯದಲ್ಲೂ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಭಕ್ತರಿಗೆ ಪ್ರವೇಶಾವಕಾಶ ಬೆಂಗಳೂರು, ಸೆಪ್ಟೆಂಬರ್ 18, 2021 (..): ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ ನಡೆಸಲು ವಾರಾಂತ್ಯದಲ್ಲೂ ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ಪಾಸಿಟಿವ್ ದರ ಇಳಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧಗಳನ್ನು ತೆರವು ಮಾಡುತ್ತಿದೆ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಹಲವು ನಿಯಮಗಳನ್ನು ಅನ್ವಯಿಸಿ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಜಿಲ್ಲಾಧಿಕಾರಿಸೂಚನೆ ನೀಡಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ ಅಂತಹವರಿಗೆ ಮಾತ್ರ ಸೇವೆಗೆ ಅವಕಾಶ ನೀಡಬೇಕು ಎಂದು ಜಿಲ್ಲಾಡಳಿತ ಆದೇಶಿಸಿದೆ.