ಇಂದು ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರು, ಸೆಪ್ಟೆಂಬರ್ 18, 2021 (..):ಇಂದು ದಾವಣಗೆರೆಯಲ್ಲಿಪೂರ್ಣ ಪ್ರಮಾಣದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ.1 ವರ್ಷದ ಬಳಿಕ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಇಂದು ಬೆಳಗ್ಗೆದಾವಣಗೆರೆಯ ತ್ರಿಶೂಲ್ ಕಲಾ ಭವನದಲ್ಲಿ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಭೆನಡೆಯಲಿದೆ.ರಾಜ್ಯದ ಪದಾಧಿಕಾರಿಗಳು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿಗಳು, ಸಹ ಸಂಘಟನಾಕಾರ್ಯದರ್ಶಿಗಳು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.