ರಾಷ್ಟ್ರೀಯ ಶಿಕ್ಷಣ ನೀತಿ ರಾಜ್ಯಕ್ಕೆ ಮಾರಕ: ಚರ್ಚಿಸದೆ ಆತುರವಾಗಿ ಜಾರಿ ಸರಿಯಲ್ಲ- ಆರ್.ಧೃವನಾರಾಯಣ್ ಆಕ್ಷೇಪ. ಮೈಸೂರು,ಸೆಪ್ಟಂಬರ್,18,2021(..):ಕೇಂದ್ರ ಸರ್ಕಾರ ಜಾರಿ ಮಾಡಲು ಮುಂದಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ವಿರೋಧ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಲದರ್ಶಿನಿಯಲ್ಲಿ ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಢಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್, ರಾಷ್ಟ್ರೀಯ ಶಿಕ್ಷಣ ನೀತಿ ರಾಜ್ಯಕ್ಕೆ ಮಾರಕ. ಹಿಮ್ಮುಖ ಚಲನೆ ಆಗುವಂತ ರಾಷ್ಟ್ರೀಯ ನೀತಿ ಇದಾಗಿದೆ.ಇಂದಿಗಾಂಧಿಯವರು 1968ರಲ್ಲಿ, ರಾಜೀವ್ ಗಾಂಧಿಯವರು 1986 ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದರು. ಆಗ ಬಹಳಷ್ಟು ಚರ್ಚೆಗಳಾಗಿತ್ತು. ಪ್ರಮುಖರ ಅಭಿಪ್ರಾಯಗಳನ್ನ ಸಂಗ್ರಹಿಸಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗಿತ್ತು. ಆದರೆ ಈಗ ಯಾವುದೇ ಚರ್ಚೆಯಾಗದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಇದರಿಂದ ನಮಗೆ ಬಹಳಷ್ಟು ಹಿನ್ನಡೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಶಿಕ್ಷಣ ನೀತಿಯ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರಗಳು ಚರ್ಚೆ ಮಾಡಬೇಕು.ಸದನ ನಡೆಯುತ್ತಿದೆ, ಈ ವೇಳೆ ಯಾವುದೇ ಅಭಿಪ್ರಾಯ ಸಂಗ್ರಹಿಸದೆ ಶಿಕ್ಷಣ ನೀತಿ ಜಾರಿಗೊಳುಸಿವ ಪ್ರಯತ್ನವಾಗಿದೆ. ಕೇಂದ್ರ ಬಜೆಟ್‌ ನಲ್ಲಿ 6% ಹಣವನ್ನ ರಾಷ್ಟ್ರೀಯ ಶಿಕ್ಷಣ ನೀತಿ ಮೀಸಲಿಡಬೇಕು.ಶಾಲೆಗಳ ಅಭಿವೃದ್ಧಿಯೂ ಆಗಿಲ್ಲ. ಶಿಕ್ಷಕರ ನೇಮಕಗಳು, ಈಗಿರುವ ಶಿಕ್ಷಕರ ಸಮಸ್ಯೆಗಳನ್ನ ಸರಿಪಡಿಸುವ ಕೆಲಸ ಆಗಿಲ್ಲ. ಇದ್ಯಾವುದನ್ನು ಮಾಡದೇ ಆತುರವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಧರ್ಮದ ಆಧಾರಿತವಾಗಿ ಶಿಕ್ಷಣ ನೀತಿ ಜಾರಿ ಮಾಡುತ್ತಿದ್ದಾರೆ ಧರ್ಮದ ಆಧಾರಿತವಾಗಿ ಶಿಕ್ಷಣ ನೀತಿ ಜಾರಿ ಮಾಡುತ್ತಿದ್ದಾರೆ. ಕಲ್ಪನೆ ಆಧಾರಿತ ವಿದ್ಯೆ ಕಲಿಸಲು ಮುಂದಾಗುತ್ತಿದ್ದಾರೆ. ಕಸ್ತೂರಿ ರಂಗನ್ ಸಮಿತಿಯ ಬುಹುತೇಕರು ಆರ್ ಎಸ್ಎಸ್ ನವರು. ಭಾರತದ ವಿವಿಧತೆಗೆ ಧ್ವನಿಯಾಗ ಬಲ್ಲ ಸದಸ್ಯರ ನೇಮಕ ಆಗಿಲ್ಲ. ನೂತನ ಶಿಕ್ಷಣ ನೀತಿಯಲ್ಲಿ ಬಹುತ್ವದ ಚಿಂತನೆಗಳಿಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಕೈಬಿಡಲಾಗಿದೆ. ಬದಲಿಗೆ 12ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಇದು ವಿದ್ಯಾರ್ಥಿಗಳನ್ನ ಕುಲಕಸುಬುಗಳಿಗೆ ಮರಳಿಸುವ ಷಡ್ಯಂತ್ರ. ಪ್ರಾಚೀನ ಸಂಸ್ಕೃತಿಗೆ, ಸಂಸ್ಕೃತ ಭಾಷೆ ಕಲಿಕೆಗೆ ಅನಗತ್ಯವಾಗಿ ಒತ್ತು ನೀಡಲಾಗುತ್ತಿದೆ ಎಂದು ಆರ್.ಧೃವನಾರಾಯಣ್ ಟೀಕಿಸಿದರು. : – – -- -. … : – . , 18, 2021 (..): . . . “ . 1968 1986 , . . . ,” . . “ . . . 12th . . ,” .: / . / / . /