ರಾಜ್ಯದಲ್ಲಿ ಅನಧಿಕೃತ ದೇವಾಲಯಗಳ ಅಧಿಕೃತ ಗೊಳಿಸಲು ಹೊಸ ಬಿಲ್ ಮಂಡನೆ- ಶಾಸಕ ಎಸ್.ಎ ರಾಮದಾಸ್. ಮೈಸೂರು,ಸೆಪ್ಟಂಬರ್,18,2021(..):ರಾಜ್ಯದಲ್ಲಿ ದೇವಾಲಯಗಳ ತೆರವು ವಿಚಾರ ಸಾಕಷ್ಟು ಸದ್ಧು ಮಾಡುತ್ತಿದ್ದು ಈ ಮಧ್ಯೆ ರಾಜ್ಯದಲ್ಲಿ ಅನಧಿಕೃತ ದೇವಾಲಯಗಳ ಅಧಿಕೃತ ಗೊಳಿಸಲು ಹೊಸ ಬಿಲ್ ಮಂಡನೆ ಮಾಡಲಾಗುತ್ತಿದೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಎಸ್. ಎ.ರಾಮದಾಸ್ ರ ಖಾಸಗಿ ಬಿಲ್ ಮಂಡಿಸಲಿದ್ದಾರೆ. ರಾಜ್ಯದಲ್ಲಿನ 2814 ಅನಧಿಕೃತ ದೇವಾಲಯಗಳನ್ನ ಅಧಿಕೃತಗೊಳಿಸಲು ಕ್ರಮ ಈ ಬಿಲ್ ಮಂಡನೆ ಮಾಡಲಾಗುತ್ತಿದೆ. ಅನಧಿಕೃತ ಹಿಂದೂ ದೇವಾಲಯಗಳ ಕ್ರಮಬದ್ಧಗೊಳಿಸುವಿಕೆ ಕಾಯ್ಧೆ 2021 ಬಿಲ್ ಅನ್ನ ಮಂಡಿಸಲಿದ್ದಾರೆ. ಈ ಕಾಯ್ದೆ ಪಾಸ್ ಮಾಡಲು ವಿಪಕ್ಷಗಳ ಬಳಿಯೂ ಶಾಸಕ ಎಸ್.ಎ ರಾಮದಾಸ್ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಎಸ್.ಎ ರಾಮದಾಸ್, ಬಿಲ್ ನಲ್ಲಿ ಭವಿಷ್ಯದಲ್ಲಿ ಅನಧಿಕೃತ ದೇವಸ್ತಾನ ನಿರ್ಮಿಸಿಸದರೆ ಕಾನೂನು ಕ್ರಮಕ್ಕೂ ಅವಕಾಶ ನೀಡಲಾಗುತ್ತದೆ. ಯಾವುದೇ ಅನಧಿಕೃತ ದೇವಾಲಯ ನಿರ್ಮಾಣವಾಗದಂತೆ ತಡೆಯಲು ಕಾಯ್ದೆ ಜಾರಿಗೆ ತರಲಾಗುತ್ತದೆ. ಬೇಕಾದರೆ ಸರ್ಕಾರ ಈ ಖಾಸಗಿ ಬಿಲ್ ಅನ್ನೂ ಸರ್ಕಾರದ ಬಿಲ್ ಆಗಿ ಮಂಡಿಸಲು ಅವಕಾಶ ಮಾಡಿಕೊಡುತ್ತೇನೆ ಎಂದಿದ್ದಾರೆ. ಮೈಸೂರಿನಲ್ಲಿ ಅನಧಿಕೃತ ವಿಷ್ಣು ಸ್ಮಾರಕ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಎಸ್.ಎ ರಾಮದಾಸ್, ಕಾನೂನು ಮೀರಿ ಯಾರೂ ಈ ರೀತಿ ಪ್ರತಿಮೆ ಸ್ಥಾಪಿಸಬಾರದು. ವಿಷ್ಣುವರ್ಧನ್ ಯಾವತ್ತೂ ಕಾನೂನು ಮೀರಿದವರಲ್ಲ. ಅವರ ಪ್ರತಿಮೆ ವಿಚಾರ ವಿವಾದ ಆಗುವುದು ಬೇಡ. ಸುಪ್ರೀಂ ಕೋರ್ಟ್ ಹೇಳಿದೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಪ್ರತಿಮೆ ನಿರ್ಮಾಣ ತಪ್ಪು ಎಂದು ಕಾನೂನಾತ್ಮಕವಾಗಿ ಭವಿಷ್ಯದಲ್ಲಿ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದರು. : - - - – - - .