ಒಂದೇ ಕುಟುಂಬದ ಐವರು ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ. ಬೆಂಗಳೂರು,ಸೆಪ್ಟಂಬರ್,18,2021(..):ಕೌಟುಂಬಿಕ ಕಲಹ ಹಿನ್ನೆಲೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ತಿಗಳರಪಾಳ್ಯದ ಬ್ಯಾಡರಹಳ್ಳಿಯ 4ನೇ ಕ್ರಾಸ್ ನಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಭಾರತಿ(50), ಮಧು ಸಾಗರ್(27), ಸಿಂಚನಾ(33) ಮತ್ತು ಸಿಂಧುರಾಣಿ(30) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹ ಹಿನ್ನೆಲೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಒಂಬತ್ತು ತಿಂಗಳ ಮಗು ಕೂಡಾ ಸಾವನ್ನಪ್ಪಿದೆ. 3 ವರ್ಷದ ಮಗುವೊಂದು ಪವಾಡಸದೃಶ್ಯ ರೀತಿಯಲ್ಲಿ ಬದುಕುಳಿದಿದೆ ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭದಲ್ಲಿ ಮನೆ ಯಜಮಾನ ಶಂಕರ್ ಮನೆಯಲ್ಲಿರಲಿಲ್ಲ. ಮನೆಗೆ ಫೋನ್ ಮಾಡಿದ್ದ ವೇಳೆ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಮನೆಯ ಬಳಿ ನಿನ್ನೆ ಬಂದು ಮನೆಬಾಗಿಲ ಬಡಿದಿದ್ದಾರೆ. ಆದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಶಂಕರ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಮನೆ ಬಾಗಿಲು ಒಡೆದು ನೋಡಿದಾಗ 5 ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. 3 ವರ್ಷದ ಮಗು ಶವಗಳ ನಡುವೆ ಬದುಕುಳಿದಿದೆ. ಶಂಕರ್ ಸಪ್ಟೆಂಬರ್ 12ರಂದು ಮನೆಯವರ ಜೊತೆ ಜಗಳವಾಡಿ ಹೊರಹೋಗಿದ್ದರು ಎನ್ನಲಾಗಿದೆ. ಮನೆಯಲ್ಲಿ ನಿತ್ಯ ಜಗಳ, ಮನಸ್ತಾಪ ನಡೆಯುತ್ತಿತ್ತು. ಇದರಿಂದ ನೊಂದು ಶಂಕರ್ ಪತ್ನಿ, ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಈ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. : - – - … : , 18, 2021 (..): . 4th , , , (50), (27), (33) (3). . . -- . -- . . ’ . ’ . , . , 3-- . 12 . . ’ . .: / / / /