ರಾಜ್ಯದಲ್ಲಿ ಮಕ್ಕಳಲ್ಲಿ ವೈರಲ್ ಫೀವರ್ ಹೆಚ್ಚಾದ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ. ಬೆಂಗಳೂರು,ಸೆಪ್ಟಂಬರ್,17,2021(..):ರಾಜ್ಯದಲ್ಲಿ ಮಕ್ಕಳಲ್ಲಿ ವೈರಲ್ ಫೀವರ್ ಹೆಚ್ಚಾದ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಇದು ಸೀಸನಲ್ ಫೀವರ್ ಎಂದು ತಿಳಿಸಿದ್ದಾರೆ. ಈಕುರಿತು ಇಂದು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೊರೋನಾ ಲಾಕ್ ಡೌನ್ ಇದ್ದ ಹಿನ್ನೆಲೆಯಲ್ಲಿ ಮಕ್ಕಳು ಮನೆಯೊಳಗೇ ಇದ್ದರು. ಈಗ ರಾಜ್ಯದಲ್ಲಿ ಎಲ್ಲಾ ಚಟುವಟಿಕೆಗಳು ಪುನಾರರಂಭವಾಗಿದೆ. ಹೀಗಾಗಿ ಮಕ್ಕಳಿಗೆ ಸೀಸನಲ್ ಫೀವರ್ ಶುರುವಾಗಿದೆ. ಈ ಬಾರಿ ವೈರಲ್ ಫೀವರ್ ಕಡೆ ಗಮನಹರಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಟೆಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. ಇನ್ನು ಆರೋಗ್ಯ ಇಲಾಖೆಯೊಂದಿಗೆ ಚರ್ಚೆ ಮಾಡಿ ಆಸ್ಪತ್ರೆಗೆ ಬೆಡ್ ಸಮಸ್ಯೆ ಬಗೆಹರಿಸಲಾಗುವುದು. ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಸಿಗುವಂತಾಗಬೇಕು. ತಜ್ಞರು ಈಗಾಗಲೆ ಕೊರೊನಾ 3 ನೇ ಅಲೆ ಬಗ್ಗೆ ವರದಿ ನೀಡಿದ್ದಾರೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಚರ್ಚೆ ಮಾಡಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. : - – – – – . … , : . . , 17, 2021 (..): , . . . , -19 . “ . , . , ,” ., , . “ 3rd . ,” .: / . . / / /