ಕಲ್ಯಾಣ ಕರ್ನಾಟಕಕ್ಕೆ ಸಿಎಂ ಬೊಮ್ಮಾಯಿ ಬಂಪರ್ ಕೊಡುಗೆ: 1500 ಕೋಟಿ ರೂ. ಘೋಷಣೆ. ಕಲಬುರಗಿ,ಸೆಪ್ಟಂಬರ್,17,2021(..):ಕಲ್ಯಾಣ ಕರ್ನಾಟಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಘೋಷಣೆ ಮಾಡಿದ್ದಾರೆ. ಹೌದು ಹೆಚ್ಚುವರಿಯಾಗಿ ಕಲ್ಯಾಣ ಕರ್ನಾಟಕಕ್ಕೆ 1500 ಕೋಟಿ ರೂ. ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು‌ ಇಂದು ಕಲಬುರಗಿ ನಗರ ಡಿಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಹೆಚ್ಚುವರಿಯಾಗಿ 1500 ಕೋಟಿ ರೂ ನೀಡುವೆ. ಈ ಹಣವನ್ನ ಸಂಪೂರ್ಣವಾಗಿ ಬಳಸಿಕೊಳ್ಳಿ. ನನ್ನ ಮಾತನ್ನ ಸವಾಲಾಗಿ ಸ್ವೀಕರಿಸಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡಿ ಎಂದು ಕರೆ ನೀಡಿದರು. ಕಲ್ಬುರ್ಗಿಯಲ್ಲಿ ನೂತನ ಟೆಕ್ಸ್ ಟೈಲ್ ಪಾರ್ಕ್ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಕರ್ನಾಟಕದ ಏಕೀಕರಣಕ್ಕೆ ಹಿರಿಯರ ಪಾತ್ರ ದೊಡ್ಡದು. ಕಲ್ಯಾಣ ಕರ್ನಾಟಕಕ್ಕೆ 371(ಜೆ) ವಿಶೇಷ ಸ್ಥಾನಮಾನ ನೀಡಲಾಗಿದೆ. ಆಡಳಿತ ನಡೆಸುವವರ ಮನಸ್ಥಿತಿ ಬದಲಾವಣೆಯಾಗುವವರೇಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಲ್ಲ. ಆದರೆ ನಾವು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬದ್ಧ ಎಂದರು. ಇದಕ್ಕೂ ಮುನ್ನ‌ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನವ ಕಲ್ಯಾಣ ಕರ್ನಾಟಕ, ನವ ಕರ್ನಾಟಕ ನಿರ್ಮಾಣಕ್ಕೆ ಆದ್ಯತೆಯಾಗಿದೆ. ಪಟೇಲರ ಕೊಡುಗೆ ದೇಶಕ್ಕೆ ಅಪಾರವಾದದ್ದು, ಅವರು ಹಾಕಿರುವ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು ಎಂದು ಹೇಳಿದರು. : - - - – - 1500 - . … ’ : . 1,500 . , 17, 2021 (..): .1,500 . , .. . , .1,500 . ., . “ , 371() . ,” .: / / .1,500/