ಅನಧಿಕೃತ ದೇಗುಲಗಳ ತೆರವು ವಿಚಾರ: ಶೀಘ್ರವೇ ಸರ್ಕಾರದಿಂದ ಸ್ಪಷ್ಟ ನಿರ್ಧಾರ- ಸಚಿವ ಆರ್. ಅಶೋಕ್. ಬೆಂಗಳೂರು,ಸೆಪ್ಟಂಬರ್,14,2021(..):ರಾಜ್ಯದಲ್ಲಿ ಅನಧಿಕೃತ ದೇವಾಲಯಗಳ ತೆರವು ವಿಚಾರ ಸಂಬಂಧ ಶೀಘ್ರವೇ ಸರ್ಕಾರದಿಂದ ಸ್ಪಷ್ಟ ನಿರ್ಧಾರ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಚಿವ ಆರ್.ಅಶೋಕ್, ಜನರ ಭಾವನೆಗೆ ಧಕ್ಕೆ ತರದಂತೆ ದೇಗುಲ ತೆರವಿಗೆ ಸೂಚನೆ ನೀಡಲಾಗುತ್ತದೆ. ಏಕಾಏಕಿ ದೇಗುಲ ತೆರುವುಗೊಳಿಸುವುದು ಸರಿಯಲ್ಲ. ಈ ವಿಚಾರವಾಗಿ ಸಿಎಂ ಬೊಮ್ಮಾಯಿ ಅವರ ಜತೆ ಚರ್ಚಿಸಿದ್ದೇನೆ. ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು ಆದರೆ ಜನರ ಭಾವನೆಗೆ ಧಕ್ಕೆಯಾಗದಂತೆ ಪಾಲಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದರು. ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜತೆ ನಾನೇ ಮಾತುಕತೆ ನಡೆಸುತ್ತೇನೆ.ಸರ್ಕಾರದಿಂದ ನಿರ್ದೇಶನ ಬರುವವರೆಗೂ ಸ್ಥಗಿತ ಮಾಡಲು ಸೂಚನೆ ನೀಡಲಾಗುವುದು ಎಂದು ಹೇಳಿದರು. ಕೆಲವು ಕಡೆ ದೇವಸ್ಥಾನಗಳನ್ನು ತೆರವು ಮಾಡುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ನ್ಯಾಯಾಲಯದ ನಿರ್ದೇಶನದ ಬಗ್ಗೆ ಸರ್ಕಾರ ಕೂಲಂಕಷವಾಗಿ ಪರಿಶೀಲನೆ ನಡೆಸಲಿದೆ. ಸರ್ಕಾರ ನಿರ್ದೇಶನ ನೀಡುವವರೆಗೂ ತೆರವುಗೊಳಿಸುವ ಅಗತ್ಯವಿಲ್ಲ. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡುವುದಾಗಿ ಸಚಿವ ಆರ್.ಅಶೋಕ್ ತಿಳಿಸಿದರು. : – –- –- - -. . …. : . – . , 14, 2021 (..): . . . “ . . , ’ , . ,” . .“ . ’ . , . ,” .: / . / / / / /