ಸೆ.23 ರಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಮೇರಿಕಾ ಪ್ರವಾಸ. ನವದೆಹಲಿ,ಸೆಪ್ಟಂಬರ್,14,2021(..):ಕೊರೋನಾ ಹಿನ್ನೆಲೆ ಹಲವು ದಿನಗಳಿಂದ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಅಮೇರಿಕಾ ಪ್ರವಾಸಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು , ಸೆಪ್ಟಂಬರ್ 23 ರಿಂದ 25ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಸೆಪ್ಟೆಂಬರ್​ 23-25ರವರೆಗೆ ಮೂರು ದಿನಗಳ ಕಾಲ ಯುಎಸ್​ ಪ್ರವಾಸ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ 24ರಂದು ಅಮೆರಿಕ ಶ್ವೇತ ಭವನದಲ್ಲಿ ನಡೆಯಲಿರುವ ಕ್ವಾಡ್​ ನಾಯಕರ ಶೃಂಗಸಭೆ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕದಲ್ಲಿ ಅಧ್ಯಕ್ಷರ ಬದಲಾವಣೆ ಆದ ಬಳಿಕ ಮೊದಲ ಬಾರಿಗೆ ಅಲ್ಲಿಗೆ ಪ್ರಧಾನಿ ಮೋದಿ ತೆರಳುತ್ತಿದ್ದಾರೆ. ಈ ಮೂರು ದಿನಗಳ ಭೇಟಿ ವೇಳೆ ಅಮೆರಿಕದ ಹೊಸ ಅಧ್ಯಕ್ಷ ಜೋ ಬೈಡನ್ ಜತೆ ದ್ವಿಪಕ್ಷೀಯ ಮಾತುಕತೆಯನ್ನೂ ಪ್ರಧಾನಿ ಮೋದಿ ನಡೆಸಲಿದ್ದಾರೆ ಎನ್ನಲಾಗಿದೆ. : - – - – – 23