ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನ. ಮಂಗಳೂರು,ಸೆಪ್ಟಂಬರ್,13,2021(..):ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ , ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್(80) ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ಫರ್ನಾಂಡಿಸ್ ಇಂದು ಕೊನೆಯುಸಿರೆಳೆದಿದ್ದಾರೆ ಆಸ್ಕರ್ ಫರ್ನಾಂಡೀಸ್ ಅವರು ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಮೆದುಳಿಗೆ ಪೆಟ್ಟಾಗಿತ್ತು. ಅವರನ್ನ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಕರ್ ಫರ್ನಾಂಡಿಸ್ ಉಡುಪಿ ಲೋಕಸಭಾ ಕ್ಷೇತ್ರದಿಂದ 5 ಬಾರಿ ಆಯ್ಕೆಯಾಗಿದ್ದರು. ಎರಡು ಭಾರಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು ಕೇಂದ್ರ ಸಾರಿಗೆ ಸಚಿವ, ಕಾರ್ಮಿಕ ಸಚಿವರಾಗಿ ಆಸ್ಕರ್ ಫರ್ನಾಂಡಿಸ್ ಕಾರ್ಯ ನಿರ್ವಹಿಸಿದ್ದರು. … , , 13, 2021 (..): , , (80) . , . . . . . .: / / / : - - -