ಬೆಲೆ ಏರಿಕೆಗೆ ಬಿಜೆಪಿ ಸರ್ಕಾರವೇ ನೇರ ಹೊಣೆ- ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿ. ಬೆಂಗಳೂರು,ಸೆಪ್ಟಂಬರ್,13,2021(..):ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಮೋಸ ಮಾಡುತ್ತಿದೆ. ಬೆಲೆ ಏರಿಕೆಗೆ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಕಾಂಗ್ರೆಸ್ ನಾಯಕರು ಎತ್ತಿನಗಾಡಿ ಏರಿ ಎತ್ತಿನಗಾಡಿ ಚಲೋ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದರು. ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಏರಿಕೆ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಮೋಸ ಮಾಡುತ್ತಿದೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿದೆ ಎಂದು ಸುಳ್ಳು ಹೇಳುತ್ತಿದೆ. ಅಂತರಾಷ್ಟ್ರೀಯ ಮಟ್ಟದ ತೈಲಬೆಲೆ ಹೆಚ್ಚಾಗಿಲ್ಲ ಎಂದು ಕಿಡಿಕಾರಿದರು. ಹಿಂದಿನ ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುತ್ತಾರೆ. ಆದರೆ 7 ವರ್ಷದಲ್ಲಿ 24 ಲಕ್ಷ ಕೋಟಿ ಸರ್ಕಾರಕ್ಕೆ ಆದಾಯ ಬಂದಿದೆ. ಬೆಲೆ ಏರಿಕೆ ವಿರುದ್ದ ಸದನದ ಒಳಗೆ ಹೊರಗೆ ಎರಡು ಕಡೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಸಿದ್ಧರಾಮಯ್ಯ ಹೇಳಿದರು. : - - - – - - … . , ’ ‘ ’ . , “ , , . , .”“ . .24 7 . ,” .