ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ‘ಎತ್ತಿನಗಾಡಿ ಚಲೋ’ : ‘ಎತ್ತಿನಗಾಡಿ’ ಏರಿ ವಿಧಾನ ಸೌಧಕ್ಕೆ ಹೊರಟ ಡಿಕೆಶಿ, ಸಿದ್ಧರಾಮಯ್ಯ. ಬೆಂಗಳೂರು,ಸೆಪ್ಟಂಬರ್,13,2021(..):ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು ಹಲವು ವಿಚಾರಗಳನ್ನಿಟ್ಟುಕೊಂಡು ಆಡಳಿತ ಪಕ್ಷದ ಮೇಲೆ ವಿಪಕ್ಷನಾಯಕರು ಮುಗಿಬೀಳಲು ಸಜ್ಜಾಗಿದ್ದಾರೆ. ಈ ಮಧ್ಯೆ ತೈಲ. ಗ್ಯಾಸ್, ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಎತ್ತಿನಗಾಡಿ ಚಲೋ ನಡೆಸಿದೆ. ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ತಮ್ಮ ನಿವಾಸದಿಂದ ವಿಧಾನಸೌಧದವರೆಗೆ ಎತ್ತಿನಗಾಡಿ ಏರಿ ಹೋಗುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದಾಶಿವನಗರ ನಿವಾಸದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ಧರಾಮಯ್ಯ ಎತ್ತಿನ ಗಾಡಿ ಏರಿ ವಿಧಾಸೌಧಕ್ಕೆ ಹೊರಟರು. ಈ ವೇಳೆ ಮಾತನಾಡಿದ ಡಿ.ಕೆ ಶಿವಕುಮಾರ್, ನಾವು ನಿಮ್ಮ ಪರವಾಗಿ ಕೆಲಸ ಮಾಡುತ್ತೇವೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಜನ ಕೊರೋನಾ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ವೇಳೆ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೀಗಾಗಿ ಈ ಸರ್ಕಾರವನ್ನ ಕೆಳಗಿಳಿಸುವವರೆಗೂ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು. ….. . : , ‘ ’ , 13, 2021 (..): . . , ‘ ’ , . , . .. , . , .. . “ , , -19 . . , ,” .: / .. / / / / / : –- - - -