ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ. ಗಾಂಧಿನಗರ,ಸೆಪ್ಟಂಬರ್,12,2021(..):ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ರನ್ನ ಆಯ್ಕೆ ಮಾಡಲಾಗಿದೆ. ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ ಮಾಡಲಾಗಿದೆ. ಇನ್ನು ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಭೂಪೇಂದ್ರ ಪಟೇಲ್ ಗಾಟ್ಲೋಡಿಯಾ ಕ್ಷೇತ್ರದ ಶಾಸಕರಾಗಿದ್ದಾರೆ. ನಿನ್ನೆಯಷ್ಟೆ ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ ನೀಡಿದ್ದರು. : – - – -