ವಿಧಾನ ಪರಿಷತ್‌ ಸಭಾನಾಯಕರಾಗಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ನಾಮನಿರ್ದೇಶನ. ಬೆಂಗಳೂರು,ಸೆಪ್ಟಂಬರ್,11,2021(..):ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭಾಪತಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ, ವಿಧಾನ ಪರಿಷತ್‌ ಸಭಾನಾಯಕರಾಗಿ ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ್‌ ಪೂಜಾರಿಯವ್ರನ್ನ ನಾಮನಿರ್ದೇಶನ ಮಾಡಿ ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : - - –- -