ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಸಾವು: ಆರೋಪಿ ಅರೆಸ್ಟ್. ಮುಂಬೈ,ಸೆಪ್ಟಂಬರ್, 11,2021(..):ಮುಂಬೈನಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು ಕೃತ್ಯವೆಸಗಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮುಂಬೈ ನ ಸಾಕಿನಾಕ ಪ್ರದೇಶದಲ್ಲಿ ನಿನ್ನೆ ಟೆಂಪೋವೊಂದರಲ್ಲಿ 30 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಅತ್ಯಾಚಾರ ಹಲ್ಲೆಯಿಂದ ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸಂತ್ರಸ್ತ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಪೊಲೀಸರು ಮೋಹನ್ ಚೌಹಾಣ್ ಎಂಬ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. : – - - –-