ಸೋಷಿಯಲ್ ಮೀಡಿಯಾದಲ್ಲಿ ಹವಾ ಸೃಷ್ಟಿಸಿದ ರಜನಿಯ ‘ಅಣ್ಣಾತ್ತೆ’ ಪೋಸ್ಟರ್ ! ಬೆಂಗಳೂರು, ಸೆಪ್ಟೆಂಬರ್ 11, 2021 (..):ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ’ ಸಿನಿಮಾ ಫಸ್ಟ್ ಲುಕ್ ಪೋಸ್ಟರ್ ಸೋಷಿಯಲ್ ಮೀಡಿಯಾದಲ್ಲಿ ಹವಾ ಸೃಷ್ಟಿಸಿದೆ. ಗೌರಿ ಹಬ್ಬದ ಪ್ರಯುಕ್ತ ಅಣ್ಣಾತ್ತೆ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿತ್ತು. ಅದರಂತೆ ನಿನ್ನೆ ಬೆಳಗ್ಗೆ ಪೋಸ್ಟರ್ ಅನಾವರಣ ಮಾಡಲಾಗಿತ್ತು. ಈ ಪೋಸ್ಟರ್ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಹವಾ ಸೃಷ್ಟಿಸಿದೆ. ರಜನಿ ಸ್ಟೈಲ್ ಕಂಡು ಫ್ಯಾನ್ಸ್ ಫುಲ್ ಖುಷಿಯಾಗಿದ್ದಾರೆ. ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ವೈಟ್ ಅಂಡ್ ವೈಟ್ ಪಂಚೆ-ಶರ್ಟ್‌ನಲ್ಲಿ ಕಾಣಿಸಿಕೊಂಡಿರುವ ತಲೈವಾ ಅಬ್ಬರಿಸಿದ್ದಾರೆ. : ’ ‘’ !