ರೈತನ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಬಿದ್ಧ ಚಿರತೆ. ಮೈಸೂರು,ಸೆಪ್ಟಂಬರ್,11,2021(..): ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹಗರನಹಳ್ಳಿ ಮಂಟಿಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಹಲವು ದಿನಗಳಿಂದ ಕಾಡಿನಿಂದ ನಾಡಿಗೆ ಬರುತ್ತಿದ್ದ ಚಿರತೆ 20 ದಿನಗಳ ಹಿಂದೆ ರೈತ ಸೋಮಯ್ಯ ಅವರ ಮೂರು ಮೇಕೆಗಳನ್ನು ಕೊಂದಿತ್ತು. ಈ ಹಿನ್ನೆಲೆಯಲ್ಲಿ ಈ ಕುರಿತು ಅರಣ್ಯ‌ ಇಲಾಖೆಗೆ ದೂರು ನೀಡಲಾಗಿತ್ತು. ನಂತರ ಗ್ರಾಮದ ಲಕ್ಕಯ್ಯ ಚೆಲುವಯ್ಯ ಜಮೀನಿನಲ್ಲಿ ಬೋನು ಇಡಲಾಗಿತ್ತು. ಇದೀಗ ಬೋನಿಗೆ ಚಿರತೆ ಬಿದ್ದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. : – -- - .