ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂ ತೆರವು ಬೆಂಗಳೂರು, ಸೆಪ್ಟೆಂಬರ್ 10, 2021 (..):ರಾಜ್ಯ ಸರ್ಕಾರ ಜಿಲ್ಲೆಗಳಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಲಾಗಿದೆ. ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾದರೆ ಮತ್ತೆ ಕರ್ಫ್ಯೂ ಜಾರಿಗೊಳಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಕರ್ನಾಟಕದಲ್ಲಿನ ಪಾಸಿಟಿವಿಟಿ ದರ ಶೇ 0.63 ಆಗಿದೆ. ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿದ್ದ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ 2ಕ್ಕಿಂತ ಕಡಿಮೆಯಾಗಿದೆ. ಆದ್ದರಿಂದ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಿ ಆದೇಶ ಹೊರಡಿಸಲಾಗಿದೆ. : , ,