ಗಣೇಶ ಹಬ್ಬದಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ದಚ್ಚು ! ಬೆಂಗಳೂರು, ಸೆಪ್ಟೆಂಬರ್ 10, 2021 (..):ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 55ನೇ ಸಿನಿಮಾದ ಟೈಟಲ್ ಹಾಗೂ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಈ ಹಿಂದೆ ಘೋಷಿಸಿದಂತೆ ಗಣೇಶ ಹಬ್ಬದಂದು ದಚ್ಚು ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಚಿತ್ರಕ್ಕೆ ‘ಕ್ರಾಂತಿ’ ಎಂಬ ಹೆಸರಿಟ್ಟಿದ್ದು, ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಈ ಪೋಸ್ಟರ್ ಅನ್ನು ರಿಲೀಸ್ ಮಾಡಲಾಗಿದೆ. ಚಿತ್ರವನ್ನು ವಿ. ಹರಿಕೃಷ್ಣ ನಿರ್ದೇಶಿಸುತ್ತಿದ್ದು, ಶೈಲಜಾ ನಾಗ್ ಮತ್ತು ಬಿ. ಸುರೇಶ್ ನಿರ್ಮಾಣ ಮಾಡಲಿದ್ದಾರೆ. ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಲ್ಲೂ ಈ ಸಿನಿಮಾ ಬಿಡುಗಡೆಯಾಗಲಿದೆ. ದರ್ಶನ್ ಈ ಪೋಸ್ಟರ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. :