ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆ. ಬೆಂಗಳೂರು,ಸೆಪ್ಟಂಬರ್,9,2021(..):ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಹೌದು ಇಂದು ಹೊಸದಾಗಿ 1074 ಕೋವಿಡ್ ಸೋಂಕಿನ ಪ್ರಕರಣಗಳು ದೃಢವಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಇಂದು ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲೂ ಮತ್ತಷ್ಟು ಇಳಿಕೆಯಾಗಿದೆ. ಇಂದು ಕೋವಿಡ್ ನಿಂದ ಸಾವನ್ನಪ್ಪರುವವರ ಸಂಖ್ಯೆ ನಾಲ್ಕು ಮಂದಿ. ಇಂದು 1136 ಮಂದಿ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಶೇ.63 ರಷ್ಟು ಪಾಸಿಟಿವ್ ರೇಟ್ ಇದ್ದು, 16,992 ಸಕ್ರಿಯ ಪ್ರಕರಣಗಳಿವೆ. ಇನ್ನು ಬೆಂಗಳೂರಿನಲ್ಲಿ ಇಂದು 343 ಕೋವಿಡ್ ಪ್ರಕರಣಗಳು ಕಂಡು ಬಂದಿವೆ. ಇಂದು ಮೂರು ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಹಾಗೆಯೇ ಇಂದು 251 ಮಂದಿ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಬೆಂಗಳೂರಿನಲ್ಲಿ ಒಟ್ಟು 7208 ಸಕ್ರಿಯ ಪ್ರಕರಣಗಳಿವೆ. : – - – – -.