ವಿದ್ಯುತ್​ ಚಾಲಿತ ವಾಹನಗಳಿಗೆ ಹೆಚ್ಚು ಪ್ರೋತ್ಸಹ ನೀಡುತ್ತೇವೆ- ಇಂಧನ ಸಚಿವ ಸುನೀಲ್ ಕುಮಾರ್. ಬೆಂಗಳೂರು,ಸೆಪ್ಟಂಬರ್,9,2021(..):ಇನ್ನು ಮುಂದೆ ವಿದ್ಯುತ್​ ಚಾಲಿತ ವಾಹನಗಳು ಅನಿವಾರ್ಯ. ಹೀಗಾಗಿ ವಿದ್ಯುತ್​ ಚಾಲಿತ ವಾಹನಗಳಿಗೆ ಹೆಚ್ಚು ಪ್ರೋತ್ಸಹ ನೀಡುತ್ತೇವೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಇಂದು ಮಾತನಾಡಿದ ಇಂಧನ ಸಚಿವ ಸುನೀಲ್ ಕುಮಾರ್, ವಿದ್ಯುತ್​ ಚಾಲಿತ ವಾಹನಗಳಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ; ವಿದ್ಯುತ್ ಚಾಲಿತ ವಾಹನಗಳು ಭವಿಷ್ಯಕ್ಕೆ ಅನಿವಾರ್ಯವಾಗಿರುವ ಕಾರಣ ನಾವು ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚು ಪ್ರೋತ್ಸಾಹ ನೀಡಲಿದ್ದೇವೆ ಎಂದು ಹೇಳಿದರು. ವಿದ್ಯುತ್​ ಚಾಲಿತ ವಾಹನಗಳಿಗೆ ಬೇಕಾದ ಅಗತ್ಯ ಸೌಕರ್ಯ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಲಿದೆ. ಈ ವಾಹನಗಳ ಬಳಕೆ ಹೆಚ್ಚಾಗಲಿದ್ದು, ಭವಿಷ್ಯದಲ್ಲಿ ಇದು ಅನಿವಾರ್ಯವಾಗಲಿದೆ. ಹೀಗಾಗಿ ರೀ ಚಾರ್ಜಿಂಗ್​ ಸೆಂಟರ್​ ಸ್ಥಾಪಿಸಲು ಹೆಚ್ಚು ಒತ್ತು ನೀಡಲಿದ್ದೇವೆ. ಇದು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. .. ‘ ’- , 9, 2021 (..): “ . , ,” . , , . . . , . ,” .: / / / : – - –- - – ,