ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: 7ನೇ ಆರೋಪಿಯ ಬಂಧನ. ಮೈಸೂರು,ಸೆಪ್ಟಂಬರ್,7,2021(..):ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂದಿಸಿದಂತೆ ಮೈಸೂರಿನ ಪೊಲೀಸರು 7ನೇ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಆಗಸ್ಟ್ 23 ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಘಟನೆ ನಡೆದ ಮೂರು ದಿನಗಳಲ್ಲಿ 6 ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಿದ್ದರು. ತಲೆ ಮರೆಸಿಕೊಂಡಿದ್ದ ಏಳನೇ ಆರೋಪಿಯ ಸೆರೆಗಾಗಿ ಮೈಸೂರು ನಗರ ಪೊಲೀಸ್ ಆಯುಕ್ತರು ಎಸಿಪಿ ನೇತೃತ್ವದಲ್ಲಿ ತಂಡ ರಚಿಸಿದ್ದರು. ನಿರಂತರ ಕಾರ್ಯಾಚರಣೆ ಬಳಿಕ ತಮಿಳುನಾಡಿನ ಗ್ರಾಮವೊಂದರಲ್ಲಿ ಅಡಗಿಕೊಂಡಿದ್ದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿ ಮೈಸೂರಿಗೆ ಕರೆ ತಂದಿದ್ದಾರೆ. ಈ ಸಂಬಂಧ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - –- – 7th .