ಡ್ರಗ್ಸ್ ಪ್ರಕರಣ: ನಟಿ, ಆ್ಯಂಕರ್ ಅನುಶ್ರೀ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ ಕಿಶೋರ್ ಶೆಟ್ಟಿ. ಬೆಂಗಳೂರು,ಸೆಪ್ಟಂಬರ್,8,2021(..):ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟಿ, ನಿರೂಪಕಿ ಅನುಶ್ರೀ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ನಿರೂಪಕಿ ಅನುಶ್ರೀ ಕೂಡ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ಡ್ರಗ್ಸ್ ಕೇಸ್ ನ ಎ2 ಆರೋಪಿ ಕಿಶೋರ್ ಶೆಟ್ಟಿ ಸ್ಪೋಟಕ ಹೇಳಿಕೆ ನೀಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಚಾರ್ಜ್ ಶೀಟ್ ನಲ್ಲಿ ಎ2 ಆರೋಪಿ ಕಿಶೋರ್ ಶೆಟ್ಟಿ ಹೇಳಿಕೆ ದಾಖಲಿಸಲಾಗಿದೆ. ಆ್ಯಂಕರ್ ಅನುಶ್ರೀ ಅವರು ಸಾಕಷ್ಟು ಬಾರಿ ಡ್ರಗ್ಸ್ ಸೇವನೆ ಮಾಡಿದ್ದಾರೆ. ಡ್ಯಾನ್ಸ್ ಪ್ರ್ಯಾಕ್ಟಿಸ್ ನಲ್ಲಿ ಹಲವು ಬಾರಿ ಡ್ರಗ್ಸ್ ಸೇವನೆ ಜೊತೆಗೆ ಡ್ರಗ್ಸ್ ಸಾಗಿಸಿದ್ದಾರೆ. ಕಿಶೋರ್ ಮತ್ತು ತರುಣ್ ಜತೆ ಡ್ರಗ್ಸ್ ಸೇವಿಸಿದ್ದಾರೆ ಎಂದು ಕಿಶೋರ್ ಶೆಟ್ಟಿ ಆರೋಪಿಸಿರುವುದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ಅಲ್ಲದೆ ಅನುಶ್ರೀಗೆ ಡ್ರಗ್ಸ್ ಪೆಡ್ಲರ್ ಗಳ ಬಗ್ಗೆ ಚೆನ್ನಾಗಿ ಗೊತ್ತಿದೆ. ಅನುಶ್ರೀಯೇ ನಮಗೆ ಡ್ರಗ್ಸ್ ಮಾತ್ರೆಗಳನ್ನ ತಂದು ಕೊಡುತ್ತಿದ್ದರು. ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದ್ರೆ ಸುಸ್ತಾಗಲ್ಲ ಎಂದು ಹೇಳುತ್ತಿದ್ದರು ಎಂದು ಕಿಶೋರ್ ಶೆಟ್ಟಿ ಆರೋಪಿಸಿದ್ದಾರೆ ಎನ್ನಲಾಗಿದೆ. … : , , 8, 2021 (..): . . . . , . . . .: / / / / : - - – - - -