ಸಚಿವ ಮುರುಗೇಶ್ ನಿರಾಣಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: ದೂರು ನೀಡಲು ನಿರ್ಧಾರ. ಬೆಂಗಳೂರು,ಸೆಪ್ಟಂಬರ್,7,2021(..):ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಸಚಿವ ಮುರುಗೇಶ್ ನಿರಾಣಿ ಅವರೇ ಮಾಹಿತಿ ನೀಡಿದ್ದಾರೆ. ಕೆಲವು ಕಿಡಿಗೇಡಿಗಳು ಫೇಸ್‍ಬುಕ್‍ನಲ್ಲಿ ತಮ್ಮ ಖಾತೆಗೆ ಕನ್ನ ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದೆಲ್ಲಾ ಮೋಸ ಮಾಡಲು ಮಾಡಿಕೊಂಡಿದ್ದಾರೆ. ಈ ಮೂಲಕ ಹಣದ ಸಹಾಯ ಕೇಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ. ಅದ್ದರಿಂದ ಯಾರೂ ನಂಬಿ ಮೋಸ ಹೋಗಬೇಡಿ ಎಂದು ಸಚಿವ ಮುರುಗೇಶ್ ನಿರಾಣಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಈ ಸಂಬಂಧ ಸೈಬರ್ ಕ್ರೈಂಗೆ ದೂರು ನೀಡುತ್ತೇನೆ ಎಂದು ಸಹ ಸಚಿವರು ತಿಳಿಸಿದ್ದಾರೆ. : -- – – -