ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಸಿಎಂ ಬೊಮ್ಮಾಯಿ ಖಡಕ್ ಸೂಚನೆ. ಬೆಂಗಳೂರು,ಸೆಪ್ಟಂಬರ್,4,2021(..):ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯಿಂದ ಸರ್ಕಾರಕ್ಕೆ ತೀವ್ರ ಮುಜುಗರವಾಗಿತ್ತು. ಈ ಹಿನ್ನೆಲೆಯಲ್ಲಿ ಗೃಹ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ವಿವಾದಾತ್ಮಕ ಹೇಳಿಕೆ ನೀಡಬೇಡಿ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಯಾರೊಬ್ಬರೂ ಸಹ ಯಾವುದೇ ವಿವಾದಗಳಿಗೆ ಎಡೆ ಮಾಡಿಕೊಡುವ ಹೇಳಿಕೆ ನೀಡಬೇಡಿ. ಮಾತನಾಡುವಾಗ ಹುಷಾರಾಗಿರಿ, ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಎಚ್ಚರದಿಂದಿರಿ ಎಂದು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. : –- –- -