ರೇಣುಕಾಸ್ವಾಮಿ ಹತ್ಯೆ ಕೇಸ್ ಗಂಭೀರವಾಗಿ ತೆಗೆದುಕೊಳ್ಳಿ: ಚುರುಕುತನ, ನಿಯತ್ತಿನಿಂದ ತನಿಖೆ ನಡೆಸಿ- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ. ಹುಬ್ಬಳ್ಳಿ,ಜೂನ್,13,2024 (..):ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್ ಸೇರಿ 13 ಮಂದಿಯನ್ನ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಈ ಕುರಿತು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನು ಕೈಗೆ ತೆಗೆದುಕೊಳ್ಳುವುದೇ ಒಂದು ಅಪರಾಧ. ರೇಣುಕಾಸ್ವಾಮಿ ಮರ್ಡರ್ ಪ್ರಕರಣ ಗಂಭೀರವಾಗಿ ತೆಎದುಕೊಳ್ಳಿ. ಚುರುಕುತನ ನಿಯತ್ತಿನಿಂದ ತನಿಖೆ ನಡೆಸಬೇಕು. ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ ಈ ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಬೇಕು. ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದರು. ದರ್ಶಣ್ ಕೇಸ್ ನಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೆಯುತ್ತಿದೆ ಕೊನೆವರೆಗೂ ಇದೇ ಚುರುಕುತನ ನಿಯತ್ತು ಇರಲಿ. ನಿಯತ್ತಿನ ತನಿಖೆ ಇದ್ದರೇ ಮಾತ್ರ ಆರೋಪಿಗಳಿಗೆ ಶಿಕ್ಷೆಯಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದರು. : , , , .