ನಟ ಹಾಗೂ ಬಿಗ್ ಬಾಸ್ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ. ಮುಂಬೈ,ಸೆಪ್ಟಂಬರ್,2,2021(..)ಬಾಲಿವುಡ್ ನಟ, ಹಿಂದಿಯ ಬಿಗ್ ಬಾಸ್ ಸೀಸನ್ 13 ರ ವಿನ್ನರ್ ಸಿದ್ಧಾರ್ಥ್ ಶುಕ್ಲಾ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮುಂಬೈನ ಆಸ್ಪತ್ರೆಯಲ್ಲಿ ಸಿದ್ಧಾರ್ಥ್ ಶುಕ್ಲಾ ನಿಧನರಾಗಿದ್ದಾರೆ. ನಟ ಸಿದ್ಧಾರ್ಥ್ ಶುಕ್ಲಾ ಗೆ ಹೃದಯಾಘಾತವಾಗಿತ್ತು. ಈ ವೇಳೆ ತಕ್ಷಣವೇ ಅವರನ್ನು ಮುಂಬೈನ ಕೂಪರ್ ಆಸ್ಪತ್ರೆಯ ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಟೆಲಿವಿಷನ್ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದ ಸಿದ್ದಾರ್ಥ್, ಬಾಲಿಕಾ ವಧು ಧಾರಾವಾಹಿ ಮೂಲಕ ಲಕ್ಷಾಂತರ ಜನರ ಮನ ಗೆದ್ದಿದ್ದರು. ತೀವ್ರ ಹೃದಯಾಘಾತದಿಂದ ಸಿದ್ಧಾರ್ಥ್ ಇಂದು ಬೆಳಗ್ಗೆ ನಿಧನರಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ. : – - - - – .