ಸುದೀಪ್ ಹುಟ್ಟುಹಬ್ಬಕ್ಕೆ ಆಡಿಯೋ ಬಯೋಗ್ರಫಿ ಮತ್ತು ಇ ಬುಕ್ ರಿಲೀಸ್ ಬೆಂಗಳೂರು, ಸೆಪ್ಟೆಂಬರ್ 02, 2021 (..):ಕನ್ನಡದಲ್ಲಿ ಮೊತ್ತ ಮೊದಲ ಬಾರಿಗೆ ಅಭಿನಯ ಚಕ್ರವರ್ತಿ ಸುದೀಪ್ ಅವರ ಬಯೋಗ್ರಫಿ ಆಡಿಯೋ ಮತ್ತು ಇ ಬುಕ್ ಆಗಿ ಅವರ ಹುಟ್ಟು ಹಬ್ಬದಂದು ಬಿಡುಗಡೆ ಆಗುತ್ತಿದೆ. ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದ “ಕನ್ನಡ ಮಾಣಿಕ್ಯ ಕಿಚ್ಚ” ಹೆಸರಿನ ಪುಸ್ತಕ ಕಳೆದ ವರ್ಷ ಬಿಡುಗಡೆಯಾಗಿ ದಾಖಲೆ ರೀತಿಯಲ್ಲಿ ಮಾರಾಟ ಆಗಿತ್ತು. ಈ ಪುಸ್ತಕವೇ ಇಂದು ಮೈ ಲ್ಯಾಂಗ್ ಆಪ್ ಮೂಲಕ ಆಡಿಯೋ ಬಯೋಗ್ರಫಿ ಮತ್ತು ಇ ಬುಕ್ ರೂಪದಲ್ಲಿ ಹೊರ ಬರುತ್ತಿದೆ. ಬಿಗ್ ಬಾಸ್ ಖ್ಯಾತಿಯ ನಟ ಚಂದನ್ ಆಚಾರ್ಯ ಈ ಪುಸ್ತಕಕ್ಕೆ ಧ್ವನಿ ನೀಡಿದ್ದು, ಸುದೀಪ್ ಅವರ ಬದುಕಿನ ಅನೇಕ ಘಟನೆಗಳನ್ನು ಮನಸೆಳೆಯುವಂತೆ ಓದಿದ್ದಾರೆ. ಈ ಬಾರಿಯ ಸುದೀಪ್ ಅವರ ಹುಟ್ಟು ಹಬ್ಬಕ್ಕೆ ಈ ಎರಡು ಉಡುಗೊರೆಯನ್ನು ನೀಡುತ್ತಿದೆ ಮೈ ಲ್ಯಾಂಗ್ ಆಪ್. ಬೆಂಗಳೂರಿನ ಕಾಯಕ ಪ್ರಕಾಶನ ಹೊರತಂದ ಈ ಕೃತಿಯು ಬಿಡುಗಡೆಯಾದ ಎರಡನೇ ದಿನಕ್ಕೆ ಮರುಮುದ್ರಣಗೊಂಡಿತ್ತು. ಆಡಿಯೋ ಮತ್ತು ಇ ಪುಸ್ತಕಕ್ಕಾಗಿ .. ಇಲ್ಲಿಗೆ ಭೇಟಿ ಕೊಡಿ.