ಕಾವೇರಿ ಜಲವಿವಾದ ಮತ್ತು ಮೇಕೆದಾಟು ಯೋಜನೆ: ಕರ್ನಾಟಕದ ಪರ ಬ್ಯಾಟ್ ಬೀಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್. ಮೈಸೂರು,ಸೆಪ್ಟಂಬರ್,1,2021(..):ಕಾವೇರಿ ಜಲವಿವಾದದ ವಿಚಾರದಲ್ಲಿ ಕರ್ನಾಟಕದ ಹಿತ ಕಾಪಾಡಲು ಬಿಜೆಪಿ ಕಟಿಬದ್ದವಾಗಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೈಸೂರಿನಲ್ಲಿ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಅರುಣ್ ಸಿಂಗ್, ರಾಜ್ಯದಿಂದ ತಮಿಳುನಾಡಿಗೆ 30 ಟಿಎಂಸಿ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ಬಹಣಾ ಮಂಡಳಿ ನೀಡಿರುವ ಆದೇಶವನ್ನು ಒಕ್ಕೂಟ ವ್ಯವಸ್ಥೆಯಲ್ಲಿದ್ದುಕೊಂಡು ಗೌರವಿಸುತ್ತೇವೆ. ಕಾವೇರಿ ನೀರು ನಿರ್ಹಹಣಾ ಮಂಡಳಿ ನೀಡಿರುವ ಆದೇಶವನ್ನು ಪರಿಶೀಲಿಸಲಾಗುವುದು. ಈ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುತ್ತೇವೆ ಎಂದರು. ಮೇಕೆದಾಟು ಯೋಜನೆಗೆ ತಮಿಳುನಾಡು ಬಿಜೆಪಿ ಘಟಕ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಕರ್ನಾಟಕದ ಪರ ಬ್ಯಾಟಿಂಗ್ ಮಾಡಿದ ಅರುಣ್ ಸಿಂಗ್, ಮೇಕೆದಾಟು ಯೋಜನೆ ವಿಚಾರದಲ್ಲೂ ರಾಜ್ಯ ಸರ್ಕಾರ ಮತ್ತು ಬಿಜೆಪಿ ಕರ್ನಾಟಕದ ರೈತರ ಹಿತ ಕಾಪಾಡಲಿದೆ ಎಂದು ಭರವಸೆ ನೀಡಿದರು. ರಾಜ್ಯ ಬಿಜೆಪಿ ಉಸ್ತುವಾರಿ ಬದಲಾಗಲಿದ್ದಾರೆಯೇ? ಎಂಬ ಪ್ರಶ್ನೆಗೆ ಹಾಗಾದರೇ ನೀವೇ ಹೇಳಿ ಯಾರು ಬರುತ್ತಿದ್ದಾರೆ? ಎಂದು ಅರುಣ್ ಸಿಂಗ್ ನಗುತ್ತಲೇ ಉತ್ತರಿಸಿದರು. … : - , 1, 2021 (..): - . ’ 30 . , . ’ ’ , . .: -/ / / / : – - - – -