ದೇಶದಲ್ಲಿ ಮತ್ತೆ ಕೊರೋನಾ ಏರಿಕೆ: ಒಂದೇ ದಿನದಲ್ಲಿ 41,965 ಮಂದಿಗೆ ಕೋವಿಡ್ ಸೋಂಕು ಪತ್ತೆ. ನವದೆಹಲಿ,ಸೆಪ್ಟಂಬರ್,1,2021(..):ದೇಶದಲ್ಲಿ ಕಳೆದ ಕೆಲ ದಿನಗಳಿಂದ ಇಳಿಕೆಯತ್ತ ಸಾಗುತ್ತಿದ್ದ ಕೊರೋನಾ ಸೋಂಕು ಇದೀಗ ಮತ್ತೆ ಏರಿಕೆಯಾಗುತ್ತಿದೆ, ಹೌದು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,965 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ಒಂದೇ ದಿನದಲ್ಲಿ 41,965 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದೇ ಅವಧಿಯಲ್ಲಿ 460 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,28,10,845ಕ್ಕೆ ಏರಿಕೆಯಾಗಿದೆ, ಸಾವಿನ ಸಂಖ್ಯೆ 4,39,020ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,78,181ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 33,964 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ 3,19,93,644 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದಾರೆ. … : 41,965 , 1,2021 (..): . 41,965 24 . , 460 24 -19. , 3,28,10,845, 4,39,020. 3,78,181. 33,965 24 3,19,93,644.: -19 / / / : - - – -41,965