10 ದಿನಗಳ ಪ್ರಕೃತಿ ಚಿಕಿತ್ಸೆಯ ಬಳಿಕ ಮಾಜಿ ಸಿಎಂ ಸಿದ್ಧರಾಮಯ್ಯ ವಾಪಸ್. ಬೆಂಗಳೂರು,ಆಗಸ್ಟ್,31,2021(..):ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ 10 ದಿನಗಳ ಕಾಲ ಪ್ರಕೃತಿ ಚಿಕಿತ್ಸೆ ಪಡೆದ ವಿಪಕ್ಷ ನಾಯಕ ಸಿದ್ಧರಾಮಯ್ಯ ಇಂದು ವಾಪಸ್ ಆಗಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನಲ್ಲಿರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ಆಗಸ್ಟ್ 21 ರಂದು ಮಾಜಿ ಸಿಎಂ ಸಿದ್ಧರಾಮಯ್ಯ ದಾಖಲಾಗಿದ್ದರು. ಇದೀಗ 10 ದಿನಗಳ ಕಾಲ ಚಿಕಿತ್ಸೆ ಪಡೆದು ವಾಪಸ್ ಆಗಿದ್ದಾರೆ. ಬಳಿಕ ಮಾತನಾಡಿರುವ ಸಿದ್ಧರಾಮಯ್ಯ, ನಾನು ಪ್ರತಿ ಬಾರಿ ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಹೋಗುತ್ತಿದ್ದೆ. ಆದರೆ ಈ ಬಾರಿ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದಿದ್ದೇನೆ. ಇಲ್ಲಿಯೂ ಉತ್ತಮವಾಗಿ ಚಿಕಿತ್ಸೆ ನೀಡಿದ್ದಾರೆ. ನಾಳೆ ಮೈಸೂರಿಗೆ ಹೋಗುತ್ತೇನೆ. ಅಲ್ಲಿ ಸುದ್ಧಿಗೋಷ್ಠಿ ನಡೆಸುತ್ತೇನೆ ಎಂದರು. … 10 , 31, 2021 (..): 10 . , 21. 10 . , . .: / / : - - –- 10 -.