ಡ್ರಗ್ಸ್ ಕೇಸ್: ಬೆಳ್ಳಂಬೆಳಗ್ಗೆ ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸರಿಂದ ದಾಳಿ. ಬೆಂಗಳೂರು,ಆಗಸ್ಟ್,30,2021(..):ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿಗಳ ಮನೆಗಳ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ. ಸೋನಿಯಾ ಅಗರವಾಲ್, ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಉದ್ಯಮಿ ಭರತ್ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಗೋವಿಂದಪುರ ಠಾಣೆ ವ್ಯಾಪ್ತಿಯ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ. ರಾಜಾಜಿನಗರ, ಪದ್ಮನಾಭನಗರ, ಬೆನ್ಸನ್ ಟೌನ್ ಸೇರಿದಂತೆ ಹಲವೆಡೆ ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. … : , 30, 2021 (..): , . , .. , . , . . , .: / / / / : -- - ’-