ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರರಿಬ್ಬರು ಸಾವು. ಮೈಸೂರು,ಆಗಸ್ಟ್,30,2021(..):ಟ್ರ್ಯಾಕ್ಟರ್ ಮತ್ತು ಬೈಕ್ ಡಿಕ್ಕಿ ನಡುವೆ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ಮೈಲಾಂಬೂರಿನ ರಾಜೇಗೌಡ (55) ಕೆ.ಆರ್.ನಗರ ತಾಲೂಕು ಮಾದಹಳ್ಳಿಯರವಿ (35) ಮೃತಪಟ್ಟವರು. ಹುಣಸೂರು ಕಡೆಯಿಂದ ಗ್ರಾಮಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದೆ. ಈ ಕುರಿತು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – – - - -