ಇಂದು ಮೈಸೂರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್. ಮೈಸೂರು,ಆಗಸ್ಟ್,30,2021(..):ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ಮೂರು ಪಕ್ಷಗಳು ಸಿದ್ಧತೆ ಆರಂಭಿಸಿದ್ದು ಈ ಮಧ್ಯೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೈಸೂರಿಗೆ ಆಗಮಿಸುತ್ತಿದ್ದಾರೆ. ಇಂದು ರಾತ್ರಿ 8:30ಕ್ಕೆ ಮೈಸೂರಿಗೆ ಆಗಮಿಸಲಿರುವ ಅರುಣ್ ಸಿಂಗ್ ನಾಳೆ ಮೈಸೂರಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಕೊಲಂಬಿಯಾ ಏಷಿಯಾ ಜಂಕ್ಷನ್ ಬಳಿ ಬಿಜೆಪಿ ಕಾರ್ಯಕರ್ತರು ಅರುಣ್ ಸಿಂಗ್ ಅವರಿಗೆ ಸ್ವಾಗತ ಕೋರಲಿದ್ದು ನಂತರ ಅವರು ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಮಧ್ಯೆ ನಾಳೆ ಬೆಳಿಗ್ಗೆ 8 ಗಂಟೆಗೆ ಅರುಣ್ ಸಿಂಗ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ಆಶಿರ್ವಾದ ಪಡೆಯಲಿದ್ದಾರೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಮೈಸೂರು-ಚಾಮರಾಜನಗರ ಜಿಲ್ಲಾಮಟ್ಟದ ಪದಾಧಿಕಾರಿಗಳ ಸಭೆ ನಡೆಸಲಿರುವ ಅರುಣ್ ಸಿಂಗ್ ನಂತರ ಜಿಲ್ಲಾ ಕೋರ್ ಕಮಿಟಿ ಮೀಟಿಂಗ್ ನಡೆಸಿ ಚರ್ಚಿಸಲಿದ್ದಾರೆ. ಇದಾದ ಬಳಿಕ ಸಂಜೆ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಲಿದ್ದಾರೆ. ಮೈಸೂರು-ಚಾಮರಾಜನಗರ ಭಾಗದಲ್ಲಿ ಪಕ್ಷ ಸಂಘಟನೆ ಕುರಿತು ಸಭೆಗಳಲ್ಲಿ ಅರುಣ್ ಸಿಂಗ್ ಸಲಹೆ ಸೂಚನೆ ನೀಡಲಿದ್ದಾರೆ. ಇನ್ನು ಸೆಪ್ಟಂಬರ್ 1ರಂದು ಅರುಣ್ ಸಿಂಗ್ ಹಾಸನ ಪ್ರವಾಸ ಕೈಗೊಂಡಿದ್ದಾರೆ. … , 30, 2021 (..): . . . 8.30 . , . 8.00, . 11.00 - -’ , . , . - . 1.: / / / / : - – - -