ಪೊಲೀಸರು ಗ್ಯಾಂಗ್ ರೇಪ್ ಪ್ರಕರಣ ಭೇದಿಸುವ ವಿಶ್ವಾಸವಿದೆ- ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಆಗಸ್ಟ್,28,2021(..):ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನ ನಮ್ಮ ಪೊಲೀಸರು ಭೇದಿಸುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಕರಣವನ್ನ ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದು, 5 ತಂಡಗಳನ್ನ ರಚಿಸಿಕೊಂಡು ಕಾರ್ಯಾಚರಣೆಗಿಳಿದಿತ್ತು. ಶೀಘ್ರವೇ ಆರೋಪಿಗಳನ್ನ ಬಂಧಿಸಲಿದ್ದಾರೆ ಎಂದರು. ಈ ಹಿಂದೆಯೂ ನಮ್ಮ ಪೊಲೀಸರು ಹಲವು ಪ್ರಕರಣಗಳನ್ನ ಭೇದಿಸಿದ್ದಾರೆ. ನಮ್ಮ ಪೊಲೀಸರು ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು. : - - - – -