ಮೈಸೂರಿನಲ್ಲಿ ಗ್ಯಾಂಗ್ ರೇಪ್ ಮತ್ತು ದರೋಡೆ ಪ್ರಕರಣ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ ಗೃಹ ಸಚಿವ ಅರಗ ಜ್ಞಾನೇಂದ್ರ. ಮೈಸೂರು,ಆಗಸ್ಟ್,27,2021(..):ಮೈಸೂರಿನಲ್ಲಿ ನಡೆದಿರುವ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ದರೋಡೆ ಮತ್ತು ಶೂಟ್‌ ಔಟ್ ಪ್ರಕರಣವನ್ನು ಮೈಸೂರು ಪೊಲೀಸರು ಭೇಧಿಸಿದ್ದಾರೆ. ಜತೆಗೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು ಈ ಕುರಿತು ಸಂಜೆ ಗೃಹ ಸಚಿವ ಅರಗ ಜ್ಞಾನೇಂದ್ರ ಸುದ್ದಿಗೋಷ್ಠಿ ನಡೆಸಿ ವಿವರ ನೀಡಲಿದ್ದಾರೆ. ಸಂಜೆ ವೇಳೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶನ ಪ್ರವೀಣ್ ಸೂದ್ ಸಹ ಮೈಸೂರಿಗೆ ಆಗಮಿಸಲಿದ್ದು ಪೊಲೀಸ್ ಮಹಾ ನಿರ್ದೇಶಕರ ಜೊತೆ ಮಾಧ್ಯಮಗೋಷ್ಠಿ ನಡೆಸಿ ಸಚಿವ ಅರಗ ಜ್ಞಾನೇಂದ್ರ ಎರಡು ಪ್ರಕರಣಗಳ ಕುರಿತು ಮಾಹಿತಿ ನೀಡಲಿದ್ದಾರೆ. : - - - – – .