ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಸುಳಿವು ಪತ್ತೆ ಹಚ್ಚಿದ ಪೊಲೀಸರು. ಮೈಸೂರು,ಆಗಸ್ಟ್,27,2021(..):ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಸುಳಿವನ್ನ ಪತ್ತೆ ಹಚ್ಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮೈಸೂರು ಬೆಂಗಳೂರು ಪೊಲೀಸರ ಜಂಟಿ ತಂಡಕ್ಕೆ ಆರೋಪಿಗಳ ಸುಳಿವು ಸಿಕ್ಕಿದೆ ಎನ್ನಲಾಗಿದೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ಮೇಲೆ ಅನುಮಾನ ವ್ಯಕ್ತವಾಗಿದೆ. ಆರೋಪಿಗಳು ತಮಿಳುನಾಡು ಮೂಲದ ಒಬ್ಬ ಹಾಗೂ ಕೇರಳ ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಮಂಗಳವಾರ ಸಂಜೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದ ಬಳಿಕ ಮಾರನೇ ದಿನ ಮೈಸೂರಿನಲ್ಲಿದ್ದ ಈ ನಾಲ್ವರು ವಿದ್ಯಾರ್ಥಿಗಳು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನಿಂದ ಪರಾರಿಯಾಗಿದ್ದಾರೆ. ಅಲ್ಲದೆ ಬುಧವಾರ ನಡೆದ ಪರೀಕ್ಷೆಗೂ ಕೂಡ ಈ ನಾಲ್ವರು ಗೈರಾಗಿದ್ದರು ಎನ್ನಲಾಗಿದೆ. ಈ ಸುಳಿವಿನ ಆಧಾರದ ಮೇಲೆ ಆರೋಪಿಗಳ ಬೆನ್ನು ಬಿದ್ದಿರುವ ಮೈಸೂರು ಪೊಲೀಸರ ತಂಡ, ಪರಾರಿಯಾಗಿರುವ ನಾಲ್ವರು ವಿದ್ಯಾರ್ಥಿಗಳನ್ನ ಬಂಧಿಸಲು ಕೇರಳ ಮತ್ತು ತಮಿಳುನಾಡಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. … : , 27, 2021 (..): . . , , . . , . , . .: / / / / / / : - -- - - – .