ರಾಷ್ಟ್ರೀಯ ಪೊಲೀಸ್ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌ ಭೇಟಿ. ನವದೆಹಲಿ,ಆ, 26,2021(..): ನವದೆಹಲಿಯ ಚಾಣಕ್ಯಪುರಿ ಯಲ್ಲಿರುವ ರಾಷ್ಟ್ರೀಯ ಪೊಲೀಸ್ ಸ್ಮಾರಕಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು. ರಾಷ್ಟ್ರೀಯ ಪೊಲೀಸ್ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯಕ್ಕೆ ಇಂದು ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ‌, ಈ ಸಂದರ್ಭದಲ್ಲಿ ಸಂದರ್ಶಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯ ದಾಖಲಿಸಿದರು. ಸ್ಮಾರಕಕ್ಕೆ ಭೇಟಿ ನೀಡಿರುವುದು ಅವಿಸ್ಮರಣೀಯ ಘಳಿಗೆ. ಈ ಮ್ಯೂಸಿಯಂ ಪೊಲೀಸರ ಕರ್ತವ್ಯಪರತೆ ಹಾಗೂ ಸಮರ್ಪಣಾ ಭಾವದ ಕುರಿತು ಒಳನೋಟ ನೀಡುತ್ತದೆ. ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತಿರುವ ಕಾರಣ ಪ್ರಜಾಪ್ರಭುತ್ವ ಯಶಸ್ವಿಯಾಗಿದೆ. ಈ ಭೇಟಿಯು ನನ್ನಲ್ಲಿ ಸಮರ್ಪಣಾ ಭಾವ ಮತ್ತು ಕರ್ತವ್ಯಪ್ರಜ್ಞೆಯನ್ನು ಜಾಗೃತಗೊಳಿಸಿದೆ. ದೇಶದ ಎಲ್ಲ ಪೊಲೀಸರಿಗೆ ನನ್ನ ನಮನಗಳು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಅಭಿಪ್ರಾಯ ದಾಖಲಿಸಿದರು. … , 26, 2021 (..): , , . ’ . . “ . . . ,” ’ .: / / / / : - - – –-