ಆ.30ರಿಂದ ನಾಲ್ಕು ದಿನಗಳ ಕಾಲ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಪ್ರವಾಸ. ಬೆಂಗಳೂರು,ಆಗಸ್ಟ್,26,2021(..):ಆಗಸ್ಟ್ 30ರಿಂದ ನಾಲ್ಕು ದಿನಗಳ ಕಾಲ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆಗಸ್ಟ್ 30ರಂದು ರಾಜ್ಯಕ್ಕೆ ಆಗಮಿಸಲಿರುವ ಅರುಣ್ ಸಿಂಗ್ ಸೆಪ್ಟಂಬರ್ 3ರವರೆಗೂ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನಾ ಪ್ರವಾಸ ಮಾಡಲಿರುವ ಅರುಣ್ ಸಿಂಗ್ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವೇಳೆ ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ ನೀಡಿದ್ದರು. : - – -