ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಆದಷ್ಟು ಬೇಗ ಆರೋಪಿಗಳನ್ನ ಬಂಧಿಸುತ್ತೇವೆ-ಗೃಹ ಸಚಿವ ಅರಗ ಜ್ಞಾನೇಂದ್ರ. ಬೆಂಗಳೂರು,ಆಗಸ್ಟ್,26,2021(..):ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಆದಷ್ಟು ಬೇಗ ಬಂಧಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ. ಈ ಕುರಿತು ಮಾಧ್ಯ,ಮಗಳ ಜತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಇದು ನಿಜಕ್ಕೂ ನಾಗರೀಕ ಸಮಾಜ ತಲೆ ತಗ್ಗಿಸುವಂತಹದ್ದು. ಶಾಂತಿಯುತ ಪ್ರದೇಶದಲ್ಲಿ ಈ ರೀತಿ ಆಗಬಾರದು. ಪೊಲೀಸರು ಎಫ್ ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಶೀಘ್ರವೇ ಆರೋಪಿಗಳನ್ನ ಬಂಧಿಸಲಾಗುವುದು ಎಂದರು. : - – – – – -