ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಎಫ್ ಐಆರ್ ದಾಖಲು. ಮೈಸೂರು,ಆಗಸ್ಟ್,25,2021(..):ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದುಷ್ಕರ್ಮಿಗಳು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಬಳಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ . ನಿನ್ನೆ ರಾತ್ರಿ 8 ಗಂಟೆ ವೇಳೆ ಸ್ನೇಹಿತನ ಜತೆಗೆ ವಿದ್ಯಾರ್ಥಿನಿ ತೆರಳುತ್ತಿದ್ದಾಗ ಲಲಿತಾದ್ರಿಪುರ ಹೊರವಲಯದಲ್ಲಿ ಕಿಡಿಗೇಡಿಗಳು ಪಾನಮತ್ತರಾಗಿ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಸ್ನೇಹಿತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೃತ್ಯವೆಸಗಿದ್ದಾರೆ. ಇನ್ನು ವಿದ್ಯಾರ್ಥಿನಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಖಚಿತ ಪಡಿಸಿಕೊಳ್ಳಲು ಪೊಲೀಸರು ತನಿಖೆ ಆರಂಭಿಸಿದ್ದು, ಸಾಕ್ಷ್ಯಧಾರಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಎಸಿಪಿ ಶಶಿಧರ್, ಇನ್ಸ್ ಪೆಕ್ಟರ್ ರವಿಕರ್, ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಎಫ್ಎಸ್ಎಲ್, ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ ಐಆರ್ ದಾಖಲಾಗಿದ್ದು, ನಾಲ್ಕರಿಂದ ಐದು ಮಂದಿಯಿಂದ ಗ್ಯಾಂಗ್ ರೇಪ್ ನಡೆದಿದೆ ಎಂದು ಎಫ್ ಐಆರ್ ನಲ್ಲಿ ಉಲ್ಲೇಖವಾಗಿದೆ.ಪ್ರಕರಣ ಸಂಬಂಧ ಆರೋಪಿಗಳನ್ನ ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. …. : , 25, 2021 (..): . . . 8.00 . . . . . , , , . , . . : // / / / : – – - ---