ಬಿಡದಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸಿದ ರಚಿತಾ ರಾಮ್ ಬೆಂಗಳೂರು, ಆಗಸ್ಟ್ 25, 2021 (..):ಬಿಡದಿ ಪೊಲೀಸ್​​ ಠಾಣೆಗೆ ರಚಿತಾ ರಾಮ್​ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಸಂಭವಿಸಿದ ಅವಘಡದಲ್ಲಿ ಫೈಟರ್​ ವಿವೇಕ್​ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ ಮೋಹನ್ ಕುಮಾರ್ ರಚಿತಾ ಅವರನ್ನು 45 ನಿಮಿಷಗಳ ಕಾಲ ವಿಚಾರಣೆ ನಡೆಸಿದ್ದಾರೆ. ಬಿಡದಿ ಪೊಲೀಸ್​​ ಠಾಣೆಗೆ ಹಾಜರಾದ ರಚಿತಾ ರಾಮ್ ಪೊಲೀಸರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದರು. ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆ ಅಲ್ಲ. ಇಂತಹ ದುರಂತ ನಡೆದಿರುವುದಕ್ಕೆ ನನಗೂ ನೋವು ಇದೆ ಎಂದಿದ್ದಾರೆ ರಚಿತಾ.