ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿ ಸಜೀವ ದಹನ: ನಾಲ್ವರ ಸ್ಥಿತಿ ಗಂಭೀರ. ಬೆಂಗಳೂರು,ಆಗಸ್ಟ್,23,2021(..):ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿ ಸಜೀವದಹನವಾಗಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಮಾಗಡಿ ರಸ್ತೆಯ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಸಜೀವ ದಹನವಾಗಿದ್ದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು ಗಾಯಾಳುಗಳನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ 6 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸಿಲಿಂಡರ್ ಸ್ಪೋಟದಿಂದ ಅಕ್ಕಪಕ್ಕದ ನಿವಾಸಿಗಳಿಗೂ ಗಾಯಗಳಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. : - - – –-