ಕೊರೊನಾ ಮೀಟರ್: ದೇಶದಲ್ಲಿ 30,948 ಹೊಸ ಕೋವಿಡ್‌ ಪ್ರಕರಣ ಬೆಂಗಳೂರು, ಆಗಸ್ಟ್ 22, 2021 (..):ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,948 ಕೋವಿಡ್‌ ಪ್ರಕರಣ ದೃಢಪಟ್ಟಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,24,24,234ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,34,367ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,53,398ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 38,487 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,16,36,469ಕ್ಕೆ ತಲುಪಿದೆ. ಕೇಂದ್ರದ ಮಾಹಿತಿ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 58,14,89,377 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.